Tuesday, 7 April 2009

ನೀನು ನೀನಾಗಿರು

ಗೆಳತಿ,
ಕಳೆದೆರಡು ದಿನದಿಂದ ನಾನು ನಿನ್ನ ಪತ್ರವನ್ನು ಜೊತೆಯಲ್ಲಿ ಇಟ್ಟುಕೊಂಡು ಮೌನವಾಗಿ ಕುಳಿತು ಬಿಟ್ಟಿದ್ದೇನೆ.ಏನು ಮಾಡೋದಕ್ಕೂ ಹೊಳಿತಾ ಇಲ್ಲ.ಅಷ್ಟು ಜಡತ್ವ.ನಿನ್ನ ಪರಿಸ್ಥಿತಿಯನ್ನು ನಾನು ಊಹಿಸಿಕೊಳ್ಳಬಲ್ಲೆ.ನಿನ್ನ ದುಃಖ ನನಗೆ ಅರ್ಥ ಆಗಿದೆ.ತಕ್ಷಣ ಬಂದು ನಿನ್ನ ಕಣ್ಣೀರನ್ನು ಒರೆಸುವ ಆಸೆ ಆದರೆ ನಾನು ಹೆಲ್ಪ್ ಲೆಸ್.ನನ್ನ ಕೆಲಸದ ರೀತಿಯೇ ಅಂತಹುದು.ಸಿಯಾಚಿನ್ ಗಡಿಯಲ್ಲಿ ನಾನು ಕರ್ಣಾಟಕದ ಮೂಲೆಯಲ್ಲಿ ನೀನೂ,ಆದರೆ ಮನಸ್ಸುಗಳಿಗೆ ಅಂತರ ಇದೆಯಾ?ನಿನ್ನ ಪ್ರೀತಿ ಒಡೆದು ಹೋಯ್ತು ಅಂತ ಬರೆದಿದ್ದಿಯಲ್ಲ ಆ ಅಂಶವೇ ನನ್ನನ್ನು ಕಂಗಾಲು ಮಾಡಿದೆ.ಅವನನ್ನು ಅದೆಷ್ಟು ಪ್ರೀತಿಸ್ತಾ ಇದ್ದೆ,ನಿನ್ನ ಪತ್ರದ ಒಂದೊಂದು ಅಕ್ಷರ ಈಗಲೂ ಅವನನ್ನು ಮರೆತಿಲ್ಲ ಅಂತ ಹೇಳ್ತಾ ಇದೆ.ನಿಜವಾ? ಮರೆಯೋದು ಸುಲಭ ಅಲ್ಲ ಅಂತ ನಂಗೆ ಗೊತ್ತು,ಗೆಳತಿ ನೀನೂ ಇನ್ನು ಅವನನ್ನು ಪ್ರೀತಿಸ್ತಾನೆ ಇದ್ದೀಯ ಹಾಗಂತ ನಂಗೆ ಈ ಪತ್ರ ಓದಿದಾಗ ಪದೇಪದೆ ಮನಸ್ಸಿಗೆ ಹೊಳೆದಿದೆ. ನಿಜವಾ ? ಯಾಕೋ ಗೊತ್ತಿಲ್ಲ ಏನು ಹೇಳ ಬೇಕು ಅಂತ ತೋಚ್ತಾನೆ ಇಲ್ಲ.ನಿನಗೆ ಮೋಸ ಮಾಡಿದ ಆ ನಿನ್ನ ಹಳೆಯ ಮಧುರ ನೆನಪಾದ ಅವನನ್ನು ಎಲ್ಲರ ಮುಂದೆ ಕ್ರೂರವಾಗಿ ನಿಂದಿಸ ಬೇಡ ಕಣೆ ಪ್ಲೀಸ್,ನೀನೂ ಇಷ್ಟು ದಿನ ಪ್ರಾಂಜಲವಾಗಿ ಪ್ರೀತಿಸಿದ್ದಕ್ಕೆ ಅವಮರ್ಯಾದೆ ಮಾಡಿದಂತೆ ಆಗುತ್ತದೆ.ನಿನ್ನಂತಹ ಅಪರೂಪದ ರತ್ನ ಪಡೆಯಲು ಆತನಿಗೆ ಲಕ್ ಇಲ್ಲ .ನೀನೂ ಅವನನ್ನು ಪ್ರೀತಿಸು ಅಂತ ಹೇಳಲ್ಲ,ದ್ವೇಷಿಸೋದು ಬೇಡ ಅಂತ ಹೇಳೋಕೆ ಇಷ್ಟ ಪಡ್ತೀನಿ .ಕ್ರೂರಿ ಅಂತ ತಿಳಿ ಬೇಡವೆ... ನೀನೂ ಎಲ್ಲರಿಗಿಂತ ಭಿನ್ನ ಅಂತ ಅವನು ಸಾಕಷ್ಟು ಸರ್ತಿ , ನನ್ನ ಮುಂದೆ ಅನೇಕರು ಹೇಳಿದ್ದಾರೆ,ಯಾವುದೋ ಒಬ್ಬ ವ್ಯಕ್ತಿಗಾಗಿ ನಿನ್ನತನ ಬಿಡಬೇಡ....!ತುಂಬಾ ಕ್ರೂರಿ ಅಥವಾ ಗಂಡಸರೆಲ್ಲ ಒಂದೇ ಅಂತ ಹೇಳ ಬೇಡ ... ನನಗೆ ನೀನೂ ನೀನಾಗಿರೋದು ಮುಖ್ಯ,ನೀನೂ ಎಂದಿಗೂ ನಿನ್ನಂತೆ ಇರಬೇಕು ಅದೇ ನನ್ನ ಆಸೆ.ಬರೆಯೋಕೆ ತೋಚ್ತಾ ಇಲ್ಲ ಕಣೆ .ಯೋಚಿಸು.. ದುಡುಕ ಬೇಡ
ನಿನ್ನ ಗೆಳೆಯ

1 comment:

  1. ಅಕ್ಕಾರೆ, ಈ ಬ್ಲಾಗ್ ಬಗ್ಗೆ ಗೊತ್ತಿರಲಿಲ್ಲ ನೋಡ್ರಿ, ಈವತ್ ದರ್ಶನ ಆತು.

    ಹದಿನೈದು ವರ್ಷ ಹಿಂದೆ ನೀವು ಸಿಕ್ಕಿದ್ರೆ ಒಂದ್ ಪ್ರೇಮ ಪತ್ರ ನಿಮ್ಮಿಂದಲೇ ಬರೆಸುತ್ತಿದೆ. ಎಷ್ಟು ಚೆಂಧ ಬರೀತೀರಪ್ಪಾ!

    ReplyDelete

Followers